ಆಗಸ್ಟ್ 15ಕ್ಕೆ ಜೀ ಕನ್ನಡದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’; ಸ್ವಾತಂತ್ರೋತ್ಸವಕ್ಕೆ ಸೆನ್ಸೇಷನಲ್ ಸಿನಿಮಾ

ಜಾಹೀರಾತುಗಳು
The Kashmir Files Premier on Zee Kannada
The Kashmir Files Premier on Zee Kannada

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಯಾರಾಗಿದೆ. ‘ಜೀ ಕನ್ನಡ’ ವಾಹಿನಿ ಮೂಲಕ ಆಗಸ್ಟ್​ 15ರಂದು ಈ ಚಿತ್ರದ ಟಿಲಿವಿಷನ್​ ಪ್ರೀಮಿಯರ್​ ಆಗಲಿದೆ.ಈ ವರ್ಷ ಅತಿ ಹೆಚ್ಚು ಸೆನ್ಸೇಷನ್​ ಸೃಷ್ಟಿ ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವುದು ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾ ಎಂದರೆ ತಪ್ಪಾಗಲ್ಲ. ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ಈ ಚಿತ್ರದಲ್ಲಿ ಅನೇಕ ವಿಚಾರಗಳನ್ನು ಚರ್ಚೆ ಮಾಡಲಾಗಿದೆ. ಹಿಂದಿಯಲ್ಲಿ ತಯಾರಾದ ಈ ಸಿನಿಮಾ ನಂತರ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಒಟಿಟಿ ಮೂಲಕ ವೀಕ್ಷಣೆಗೆ ಲಭ್ಯವಾಗಿತ್ತು.

ಈಗ ಇದೇ ಮೊದಲ ಬಾರಿಗೆ ಕನ್ನಡ ಕಿರುತೆರೆಯಲ್ಲಿ ಈ ಸಿನಿಮಾ ಪ್ರಸಾರಕ್ಕೆ ಸಕಲ ಸಿದ್ಧತೆ ನಡೆದಿದೆ. ಜೀ ಕನ್ನಡ (Zee Kannada) ವಾಹಿನಿಯಲ್ಲಿ ಆಗಸ್ಟ್​ 15ರಂದು ಸ್ವಾತಂತ್ರೋತ್ಸವದ (Independence Day) ಪ್ರಯುಕ್ತ ಮಧ್ಯಾಹ್ನ 3 ಗಂಟೆಗೆ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಪ್ರಸಾರ ಆಗಲಿದೆ. ಚಿತ್ರಮಂದಿರದಲ್ಲಿ ಮತ್ತು ಒಟಿಟಿಯಲ್ಲಿ ಈ ಚಿತ್ರವನ್ನು ಮಿಸ್​ ಮಾಡಿಕೊಂಡವರಿಗೆ ಈಗ ಕಿರುತೆರೆಯಲ್ಲಿ ವೀಕ್ಷಿಸಲು ಅವಕಾಶ ಸಿಗುತ್ತಿದೆ.

ಜಾಹೀರಾತುಗಳು

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಯಾರಾಗಿದೆ. ಅನುಪಮ್​ ಖೇರ್​, ದರ್ಶನ್​ ಕಮಾರ್​, ಪಲ್ಲವಿ ಜೋಶಿ, ಮಿಥುನ್​ ಚಕ್ರವರ್ತಿ, ಪ್ರಕಾಶ್ ಬೆಳವಾಡಿ, ಪುನೀತ್​ ಇಸಾರ್​ ಮುಂತಾದವರು ಇದರಲ್ಲಿ ನಟಿಸಿದ್ದಾರೆ. ನೈಜ ಘಟನೆಗಳನ್ನು ಆಧಾರವಾಗಿ ಇಟ್ಟುಕೊಂಡು ನಿರ್ಮಾಣವಾದ ಈ ಸಿನಿಮಾವನ್ನು ಅನೇಕ ರಾಜಕಾರಣಿಗಳು ನೋಡಿ ಮೆಚ್ಚಿಕೊಂಡಿದ್ದರು. ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ ಮುಂತಾದವರು ಮೆಚ್ಚುಗೆ ಮಾತುಗಳನ್ನು ಆಡಿದ್ದರು.‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ ತಯಾರಾಗಿದ್ದು 15ರಿಂದ 20 ಕೋಟಿ ರೂಪಾಯಿ ಬಜೆಟ್​ನಲ್ಲಿ. ಆದರೆ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಗಳಿಸಿದ್ದು ಬರೋಬ್ಬರಿ 252 ಕೋಟಿ ರೂಪಾಯಿ ಎಂಬುದು ಅಚ್ಚರಿಯ ಸಂಗತಿ. ಈ ಬೆಳವಣಿಗೆಯನ್ನು ಕಂಡು ಎಲ್ಲರೂ ಬೆರಗಾದರು. ಇತ್ತೀಚಿನ ವರ್ಷಗಳಲ್ಲಿ ಯಾವುದೇ ಸಿನಿಮಾ ಕೂಡ ಗಲ್ಲಾಪೆಟ್ಟಿಗೆಯಲ್ಲಿ ಈ ರೀತಿಯ ಮ್ಯಾಜಿಕ್​ ಮಾಡಿರಲಿಲ್ಲ.

Leave a Comment